BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

social activist anna hazare hospitalised ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು, ಆಸ್ಪತ್ರೆಗೆ ದಾಖಲು..!


ಮುಂಬೈ,ಸೆಪ್ಟೆಂಬರ್, 01 : ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ.

ಅಣ್ಣಾ ಹಜಾರೆಯವರು ತೀವ್ರ ವೈರಲ್ ಸೋಂಕು ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದು, ಮುಂಬೈನ ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ತಜ್ಞ ವೈದ್ಯರ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರಿಗೆ ಸಂಪೂರ್ಣ ವಿಶ್ರಾಂತಿಯ ಅಗತ್ಯವಿರುವುದರಿಂದ ವೈದ್ಯರು ಸಾರ್ವಜನಿಕ ಭೇಟಿಯನ್ನು ನಿರ್ಬಂಧಿಸಿದ್ದಾರೆ.

ಅಣ್ಣಾ ಹಜಾರೆ ಅವರಿಗೆ ಸಂಪೂರ್ಣ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಸಾರ್ವಜನಿಕ ಭೇಟಿ ಹಾಗೂ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸಲಹೆ ನೀಡಲಾಗಿದೆ. ಇತ್ತ ದೇಶಾದ್ಯಂತ ಅವರ ಬೆಂಬಲಿಗರು ಮತ್ತು ಗಣ್ಯರು ಹಜಾರೆ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತಿದ್ದಾರೆ 


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!