BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Soujanya case ಸೌಜನ್ಯಾ ಪ್ರಕರಣದ ಎಸ್‌ಐಟಿಯಿಂದ ಹೊರಗುಳಿಯಲು ಎಎಸ್‌ಪಿ ಡಾ. ವೆಂಕಟೇಶ್ ಪ್ರಸನ್ನರಿಂದ ಸರ್ಕಾರಕ್ಕೆ ಪತ್ರ

ಬೆಂಗಳೂರು, ಸೆ 30: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತಮ್ಮನ್ನು ಕೈಬಿಡುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ವೆಂಕಟೇಶ್ ಪ್ರಸನ್ನ ಅವರು ರಾಜ್ಯ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ.   ಮೃತ ಸೌಜನ್ಯಾ ಅವರ ತಾಯಿ ಮತ್ತು ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ತನಿಖಾ ತಂಡದಲ್ಲಿ ಮುಂದುವರಿಯುವುದು ನೈತಿಕವಾಗಿ ಸೂಕ್ತವಲ್ಲ ಎಂಬ ಕಾರಣಕ್ಕೆ ಅವರು ಈ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಚಿತಪಡಿಸಿದ್ದಾರೆ.   ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭಕ್ಕೂ ಮುನ್ನವೇ ಎಸ್‌ಐಟಿಯಲ್ಲಿ ಈ ಬೆಳವಣಿಗೆ ನಡೆದಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಈ ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಹಾಗೂ ಡಿಐಜಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಗುಪ್ತದಳದ ಎಸ್‌ಪಿ ನಿಶಾ ಜೇಮ್ಸ್, ಸಿಐಡಿ ಎಸ್‌ಪಿ ಲೋಕೇಶ್ ಜಗಲಸಾರ್ ಹಾಗೂ ಎಎಸ್‌ಪಿ ಡಾ. ವೆಂಕಟೇಶ್ ಪ್ರಸನ್ನ ಸದಸ್ಯರಾಗಿದ್ದರು.   ಕುಟುಂಬದವರಿಂದ ಕೆಲ ಅಧಿಕಾರಿಗಳ ಕುರಿತು ಅವಿಶ್ವಾಸ ಹಾಗೂ ಆಕ್ಷೇಪ ವ್ಯಕ್ತವಾಗಿರುವ ಕಾರಣ, ತಮ್ಮನ್ನು ಕೈಬಿಡುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ವೆಂಕಟೇಶ್ ಪ್ರಸನ್ನ ಅವರು ರಾಜ್ಯ ಸರ್ಕಾರಕ್ಕೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಎಎಸ್‌ಪಿ ಅವರ ಈ ಮನವಿಯನ್ನು ಸರ್ಕಾರ ಅಂಗೀಕರಿಸಲಿದೆಯೇ ಅಥವಾ ಅವರನ್ನು ತಂಡದಲ್ಲೇ ಮುಂದುವರಿಸಲಿದೆಯೇ ಎಂಬುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.   

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!