BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Supreme court on SIR ಮುಖ್ಯ ಚುನಾವಣಾ ಆಯುಕ್ತರ ಕಾರ್ಯವೈಖರಿ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ, ವಿಚಾರಣೆge ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ!


ಹೊಸದಿಲ್ಲಿ, ಸೆ 29 : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪ್ರಶ್ನಿಸಿ ಹಾಗೂ ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಅಕ್ರಮ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿಗೆ ಸೂಚಿಸಿದೆ.

ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಮತದಾರರ ಪಟ್ಟಿಗಳ ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳ ಕುರಿತು ಕನಿಷ್ಠ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ಮಾಧ್ಯಮ ವರದಿಗಳ ಬೆನ್ನಲ್ಲೇ ಈ ಅರ್ಜಿ ಮಹತ್ವ ಪಡೆದುಕೊಂಡಿದೆ. ತಮ್ಮ ಅರಿವು ಅಥವಾ ಶಿಫಾರಸಿಲ್ಲದೆ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಇಬ್ಬರು ಚುನಾವಣಾ ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೂ, ಆ ಪತ್ರಗಳು ನೀತಿ ಅಥವಾ ಐಟಿ ವಿಭಾಗಕ್ಕೆ ಸಂಬಂಧಿಸಿರದೆ, ನಿಯೋಜನೆಯ ಮೇರೆಗೆ ಕೆಲಸ ಮಾಡುತ್ತಿದ್ದ ಅಧಿಕಾರಿಗೆ ಸಂಬಂಧಿಸಿದ್ದವು ಎಂದು ಚುನಾವಣಾ ಆಯೋಗವು ಸ್ಪಷ್ಟನೆ ನೀಡಿತ್ತು.

ಇಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಅವರು, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ಅರ್ಜಿಯನ್ನು ಶೀಘ್ರ ವಿಚಾರಣೆಗೆ ನಡೆಸುವಂತೆ ಮನವಿ ಮಾಡಿದರು. ಬಹುಸದಸ್ಯೀಯ ಆಯೋಗದಲ್ಲಿ ನಿರ್ಧಾರಗಳು ಸರ್ವಾನುಮತದಿಂದ ಅಥವಾ ಬಹುಮತದ ಆಧಾರದ ಮೇಲೆ ಆಗಬೇಕು. ಆದರೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ಸರಿಯಾದ ನಿರ್ಧಾರವಿತ್ತೇ ಎಂಬ ಬಗ್ಗೆ ಗಂಭೀರ ಅನುಮಾನವಿದೆ ಎಂದು ವಾದಿಸಿದರು.

ವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿಗಳು, ಈ ಪ್ರಮುಖ ಅರ್ಜಿಯನ್ನು ವಿಚಾರಣೆಗಾಗಿ ಮುಂದಿನ ವಾರ ಪಟ್ಟಿ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!