BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Thinking about shutting down KPSC: CM D.K. Shivakumar ಭ್ರಷ್ಟಾಚಾರದ ಕೂಪವಾಗಿರುವ ಕೆಪಿಎಸ್ ಸಿ ಮುಚ್ಚುವ ಬಗ್ಗೆ ಗಂಭೀರ ಚಿಂತನೆ: ಸಿಎಂ ಡಿಕೆ ಶಿವಕುಮಾರ್


ಬೆಂಗಳೂರು,ಸೆ,22:  "ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. 

ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು. "ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಒಂದು ದಿನ ಎಲ್ಲವೂ ಹೊರಗೆ ಬರುತ್ತದೆ" ಎಂದರು. 

ಕೆಪಿಎಸ್‌ ಸಿ ಹಗರಣ; ತನಿಖಾಧಿಕಾರಿಗಳ ನೇಮಕದ‌‌ ಸ್ವಾತಂತ್ರ್ಯ ನಮಗೆ ಕೊಡಬೇಕಿತ್ತು

"ಹೈಕೋರ್ಟ್ ಎಸ್ ಐಟಿ ರಚನೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಇಡಿ ಕೂಡ ತನಿಖೆ ಮಾಡುತ್ತಿದೆ. ಆದರೆ, ನಮ್ಮ ಪೊಲೀಸ್ ಇಲಾಖೆಯೂ ತನಿಖೆಯನ್ನು ಬಹಳ ಚೆನ್ನಾಗಿ ನಡೆಸುತ್ತಿದೆ. ನ್ಯಾಯಾಲಯ ಅಗತ್ಯವಿದ್ದರೆ ನಮ್ಮ ಪೊಲೀಸ್ ಇಲಾಖೆಯ ತನಿಖೆಯ ವೈಖರಿಯ ಉಸ್ತುವಾರಿ ನೋಡಬಹುದಿತ್ತು. ನ್ಯಾಯಾಲಯ ಎಸ್ ಐಟಿ ತನಿಖೆಗೆ ನಿರ್ದೇಶಿಸಿರುವುದು  ಸರಿ. ಆದರೆ, ತನಿಖಾಧಿಕಾರಿಗಳ ನೇಮಕದ ಸ್ವಾತಂತ್ರ್ಯವನ್ನು ರಾಜ್ಯಸರ್ಕಾರಕ್ಕೆ ಕೊಡಬೇಕಿತ್ತು. ಈ ಬಗ್ಗೆ ದೆಹಲಿ, ಬೇರೆ ಬೇರೆ ರಾಜ್ಯಗಳಿಂದ ನಮಗೆ ಕರೆ ಬಂದಿತ್ತು. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇನೆ" ಎಂದು ಹೇಳಿದರು. 

ನಮಗೆ ಮಕ್ಕಳ ಭವಿಷ್ಯ ಮುಖ್ಯ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ  ಕೆಪಿಎಸ್ ಸಿಯಲ್ಲಿದ್ದ ಸದಸ್ಯರ ಸಂಖ್ಯೆಯನ್ನು ಕಡಿತಗೊಳಿಸಿದ್ದರು. ನಾವು ನಂಬಿಕೆ ಇಟ್ಟು, ಪಾರದರ್ಶಕವಾಗಿ ಆಯ್ಕೆ ಮಾಡಿ ಅಧಿಕಾರಿಗಳನ್ನು ಕಳುಹಿಸಿದರೆ ಅವರೂ ಹೀಗೆ ಮಾಡುತ್ತಾರೆ" ಎಂದರು.  

   "ನಾನು ಇಂಧನ ಸಚಿವನಾಗಿದ್ದಾಗ 22 ಸಾವಿರ ಮಂದಿ ಲೈನ್ ಮ್ಯಾನ್,  ಎಂಜಿನಿಯರ್ ಗಳ ಹುದ್ದೆ ತುಂಬಿದ್ದೇನೆ. ಬಹಳ ಜಾಗೃತನಾಗಿ ಈ ಕೆಲಸ ಮಾಡಿದ್ದೇನೆ. ಅದಕ್ಕೂ ಮೊದಲು ಖಾಲಿ ಪೇಪರ್ ನಲ್ಲಿ ಬರೆಸುವ ಭ್ರಷ್ಟ ಸಂಪ್ರದಾಯ ಇತ್ತು. ಆದರೆ ನಾನು ಅದಕ್ಕೆಲ್ಲಾ ಅವಕಾಶ ಕೊಡಲಿಲ್ಲ" ಎಂದು ಹೇಳಿದರು. 

https://youtube.com/shorts/pqmgScAgTCk?feature=share


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!