BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Tulu ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆ ಸ್ಥಾನಮಾನ: ಸರ್ಕಾರದ ಗಂಭೀರ ಚಿಂತನೆ - ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು, ಸೆಪ್ಟೆಂಬರ್ 16 : ಕರಾವಳಿಯ ಬಹುಕಾಲದ ಬೇಡಿಕೆಯಾಗಿರುವ ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಸಂವಿಧಾನಾತ್ಮಕ ಚೌಕಟ್ಟಿನೊಳಗೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ತುಳು ಭಾಷೆಯ ಇತಿಹಾಸ, ಸಾಹಿತ್ಯ ಪರಂಪರೆ, ಲಿಪಿ, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯ, ಸಂಸ್ಕೃತಿ ಮತ್ತು ತುಳು ಶಾಸನಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು 2023ರ ಫೆಬ್ರುವರಿ 14ರಂದು ಸರ್ಕಾರಕ್ಕೆ ತನ್ನ ಅಧಿಕೃತ ವರದಿಯನ್ನು ಸಲ್ಲಿಸಿತ್ತು.  ಅಧ್ಯಯನ ತಂಡದ ಪ್ರವಾಸ ಮತ್ತು ವರದಿ:ಆಳ್ವ ಸಮಿತಿಯ ವರದಿಯ ಮುಂದುವರಿದ ಹಂತವಾಗಿ, ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚುವರಿ ಅಥವಾ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಿರುವ ಮಾದರಿಗಳನ್ನು ಅಧ್ಯಯನ ಮಾಡಲು 2025ರ ಜುಲೈ 30ರಂದು ವಿಶೇಷ ಅಧ್ಯಯನ ತಂಡವನ್ನು ರಚಿಸಲಾಗಿತ್ತು. ಈ ತಂಡವು 2026ರ ಜನವರಿ 19 ಮತ್ತು 20ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಅಧಿಕೃತ ಭಾಷಾ ವ್ಯವಸ್ಥೆ, ಕಾನೂನು ಚೌಕಟ್ಟು ಹಾಗೂ ಅನುಷ್ಠಾನದ ಮಾದರಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿತ್ತು. ಈ ಎಲ್ಲ ಪ್ರಕ್ರಿಯೆಗಳ ಬಳಿಕ ಮಾರ್ಚ್ 2026ರಲ್ಲಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆಯಾಗಿದೆ.  ಸರ್ಕಾರದ ಬದ್ಧತೆ:ಈ ಕುರಿತು ಮಾತನಾಡಿರುವ ಸಚಿವರು, "ತುಳು ಕೇವಲ ನಮ್ಮ ಕರಾವಳಿಯ ಭಾಷೆಯಷ್ಟೇ ಅಲ್ಲ, ಅದು ಕರ್ನಾಟಕದ ಶ್ರೀಮಂತ ಭಾಷಾ-ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ತುಳು ಭಾಷೆಯ ಗೌರವ, ಸಂರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದ್ದು, ಕಾನೂನಿನ ಚೌಕಟ್ಟಿನಲ್ಲಿ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದ್ದಾರೆ.  

https://x.com/sstangadagi/status/2099871760757981394?s=20

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!