BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಉಡುಪಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಸೆ. 14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ


ಉಡುಪಿ, ಸೆಪ್ಟೆಂಬರ್ 12 : ಉಡುಪಿಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆಪ್ಟೆಂಬರ್ 14, 16 ಮತ್ತು 18ರಂದು ವಿವಿಧ ಅವಧಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 14: ಅಂದು ಬೆಳಿಗ್ಗೆ 6ರಿಂದ ರಾತ್ರಿ 12ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸೆಪ್ಟೆಂಬರ್ 16: ಅಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಕೇವಲ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೆಪ್ಟೆಂಬರ್ 18: ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧ ಇರಲಿದೆ.

 ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲೂ ಸಹ ಈ ನಿಷೇಧ ಆದೇಶವು ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದೆ.

ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಅವಧಿಯಲ್ಲಿ ಬಾರ್‌ಗಳು, ಮದ್ಯದಂಗಡಿಗಳು ಹಾಗೂ ಮದ್ಯ ಮಾರಾಟ ಮಾಡುವ ಇತರೆ ಸಂಸ್ಥೆಗಳು ಸಂಪೂರ್ಣವಾಗಿ ವ್ಯಾಪಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!