ಉಡುಪಿ,ಸೆ 23: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂಜೆ ದೊಡ್ಡಮನೆ ಗಣೇಶ್ ಶೆಟ್ಟಿ ಅವರ ಮನೆಯ ಹಟ್ಟಿಯ ಹಿಂಭಾಗದಲ್ಲಿ ಮುಂಜಾನೆ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ.
ಕಪ್ಪು ಚಿರತೆಯು ಪ್ರತ್ಯಕ್ಷಗೊಂಡಿರುವುದರಿಂದ ಬೆಳಂಜೆ ಸುತ್ತಮುತ್ತಲಿನ ಪರಿಸರದಲ್ಲಿ ತೀವ್ರ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯರು ಆತಂಕದಲ್ಲೇ ದಿನ ಕಳೆಯುವಂತಾಗಿದೆ.
ಈ ಕೂಡಲೇ ಅರಣ್ಯ ಇಲಾಖೆಯವರು ಎಚ್ಚೆತ್ತುಕೊಂಡು ಸ್ಥಳಕ್ಕೆ ಭೇಟಿ ನೀಡಿ, ಚಿರತೆಯನ್ನು ಸೆರೆಹಿಡಿಯಲು ಅಗತ್ಯವಿರುವ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯ ಮುಖಂಡರಾದ ಅಮೃತ್ ಕುಮಾರ್ ಶೆಟ್ಟಿ ಅವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತೀವ್ರವಾಗಿ ಒತ್ತಾಯಿಸಿದ್ದಾರೆ.