BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi Crime ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ನೀಡಿ ನ್ಯಾಯಾಲಯವನ್ನೇ ಯಾಮರಿಸಲು ಹೋದ ಇಬ್ಬರು ಖದೀಮರು ಅಂದರ್


ಉಡುಪಿ,ಸೆಪ್ಟೆಂಬರ್ 11:ನ್ಯಾಯಾಲಯದಲ್ಲಿ ಪ್ರಕರಣವೊಂದರಲ್ಲಿ ಜಾಮೀನಿಗಾಗಿ ನಕಲಿ ಆಧಾ‌ರ್ ಕಾರ್ಡ್ ಹಾಜರುಪಡಿಸಿರುವ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣವೊಂದರ ಜಾಮೀನು ಪ್ರಕ್ರಿಯೆ ವೇಳೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಹಾಜರುಪಡಿಸಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ 'ನೋಮಾನ್' ಎಂಬ ಆರೋಪಿಗೆ ಜಾಮೀನು ಕೊಡಿಸುವ ಸಲುವಾಗಿ, ಬಂಟ್ವಾಳದ ಉಮ್ಮರ್ ಫಾರೂಕ್ ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ ಎಂಬುವವರು ನಕಲಿ ದಾಖಲೆ ಸೃಷ್ಟಿಸಿದ್ದರು. ಪ್ರಶಾಂತ್ ಎಂಬವರ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿ, ಕೆ.ಟಿ. ಮೊಹಮ್ಮದ್ ಎಂಬವರ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಸಿದ್ಧಪಡಿಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನಿಸಲಾಗಿದೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!