BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi EV Scooty caught Fire ಉಡುಪಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಏಕಾಏಕಿ ಬೆಂಕಿ - ಸಂಪೂರ್ಣ ಸುಟ್ಟು ಕರಕಲು, ಸವಾರ ಪಾರು


ಉಡುಪಿ,ಸೆಪ್ಟೆಂಬರ್ 13 : ಉಡುಪಿ ನಗರದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಸ್ಕೂಟಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.

ಸವಾರನು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಬ್ಯಾಟರಿ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ, ತಕ್ಷಣ ರಸ್ತೆ ಮಧ್ಯೆಯೇ ಸ್ಕೂಟಿಯನ್ನು ನಿಲ್ಲಿಸಿ ಕೆಳಗಿಳಿದು ದೂರ ಸರಿದಿದ್ದಾರೆ. ಸವಾರನ ಈ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ.

ಸ್ಕೂಟಿಯಿಂದ ಕೆಳಗಿಳಿದ ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ದೊಡ್ಡದಾಗಿ ಹೊತ್ತಿ ಉರಿಯಲಾರಂಭಿಸಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ, ಅಷ್ಟರೊಳಗೆ ಸ್ಕೂಟಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬ್ಯಾಟರಿ ಓವರ್‌ಹೀಟ್ ಆಗಿರುವುದು ಅಥವಾ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವುದು ಈ ಅವಘಡಕ್ಕೆ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!