BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi Fish truck Accident ಕಟಪಾಡಿಯಲ್ಲಿ ಅಂಡರ್ ಪಾಸ್ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಮೀನಿನ ಲಾರಿ; ಚಾಲಕ, ನಿರ್ವಾಹಕ ಪಾರು


ಉಡುಪಿ, ಸೆಪ್ಟೆಂಬರ್ 13 : ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮೀನು ಸಾಗಣೆ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ, ಕಾಮಗಾರಿ ನಡೆಯುತ್ತಿದ್ದ ಕಟಪಾಡಿ ಅಂಡರ್ ಪಾಸ್‌ನ ತಡೆಗೋಡೆಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸೆಪ್ಟೆಂಬರ್ 12ರ ನಸುಕಿನ ಜಾವ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಉತ್ತರ ಭಾರತ ಮೂಲದ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದು, ಅದೃಷ್ಟವಶಾತ್ ಭಾರೀ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನತ್ತ ಸಾಗುತ್ತಿದ್ದ ಈ ಲಾರಿಯು ಪರ್ಯಾಯ ರಸ್ತೆಯನ್ನು ಬಿಟ್ಟು, ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದ ನಿರ್ಬಂಧಿತ ಪ್ರದೇಶದೊಳಗೆ ನುಗ್ಗಿದ್ದರಿಂದ ಈ ಅಪಘಾತ ಸಂಭವಿಸಿದೆ. ಪರಿಣಾಮ ಲಾರಿಯು ಪಲ್ಟಿಯಾಗಿದೆ.

ಘಟನಾ ಸ್ಥಳಕ್ಕೆ ಖಾಸಗಿ ಆಂಬುಲೆನ್ಸ್‌ನ ಜಲಾಲುದ್ದೀನ್ ಅಲಿಯಾಸ್ ಜಲ್ಲು ಉಚ್ಚಿಲ, ಹಮೀದ್ ಉಚ್ಚಿಲ ಹಾಗೂ ಸ್ಥಳೀಯರು ಧಾವಿಸಿ, ಗಾಯಾಳುಗಳನ್ನು ತಕ್ಷಣವೇ ಉಡುಪಿಯ ಆಸ್ಪತ್ರೆಗೆ ದಾಖಲಿಸಿ ಚಿಕತ್ಸೆ ಕೊಡಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!