ಉಡುಪಿ, ಸೆ 30 : ಕರಾವಳಿಯಿಂದ ಬೆಂಗಳೂರಿಗೆ ಹೋಗುವ ರೈಲು ಪ್ರಯಾಣಿಕರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭ ಸುದ್ದಿ ನೀಡಿದ್ದಾರೆ. ಮಂಗಳೂರು-ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿನವರೆಗೆ ವಿಸ್ತರಿಸಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರದ ಮೂಲಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮಾಹಿತಿ ನೀಡಿದ್ದಾರೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು 2025ರ ನವೆಂಬರ್ 12, 2026ರ ಜೂನ್ 6 ಹಾಗೂ ಆಗಸ್ಟ್ 10ರಂದು ಕೇಂದ್ರ ಸಚಿವರಿಗೆ ಪತ್ರ ಬರೆದು ಬೆಂಗಳೂರಿನಿಂದ ಮಂಗಳೂರು-ಮಡಗಾಂವ್ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಿಸುವಂತೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿದ್ದು ಪ್ರಸ್ತುತ ಮಡಗಾಂವ್-ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ಎ ಕ್ಸ್‌ಪ್ರೆಸ್ ರೈಲನ್ನು ಉಡುಪಿ, ಕುಂದಾಪುರ ಹಾಗೂ ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ವಿಸ್ತರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
MRPL ಘಟಕದಲ್ಲಿ ಸ್ಫೋಟದ ಹಿನ್ನೆಲೆ ಅಧಿಕೃತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ