BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

udupi ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!


ಉಡುಪಿ ,ಸೆಪ್ಟೆಂಬರ್ 10 : ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಭಕ್ತರಿಗೆ ವಂಚಿಸಿ ಹಣ ಲೂಟಿ ಮಾಡುತ್ತಿದ್ದ ಜಾಲದ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಬದಲಾಗಿ, ದುಷ್ಕರ್ಮಿಗಳು ಅಕ್ರಮ ಲಾಭದ ಉದ್ದೇಶದಿಂದ ‘Hotel Accommodation’ ಹೆಸರಿನಲ್ಲಿ `jagadambikaguesthouse.xyz` ಎಂಬ ನಕಲಿ ವೆಬ್‌ಸೈಟ್ ಅನ್ನು ಸೃಷ್ಟಿಸಿದ್ದರು. ಈ ನಕಲಿ ಜಾಲತಾಣದ ಮೂಲಕ ಜಗದಾಂಬಿಕಾ ಅತಿಥಿ ಗೃಹದ ಕೊಠಡಿಗಳನ್ನು ಕಾಯ್ದಿರಿಸುವುದಾಗಿ ನಂಬಿಸಿ ಭಕ್ತರಿಗೆ ಮೋಸ ಮಾಡುತ್ತಿದ್ದರು. 

ವಂಚನೆ ಹೇಗೆ ನಡೆಯುತ್ತಿತ್ತು?

 ನಕಲಿ ವೆಬ್‌ಸೈಟ್ ಮೂಲಕ ಸಂಪರ್ಕಿಸುವ ಭಕ್ತರೊಂದಿಗೆ ವಾಟ್ಸ್‌ಆಪ್‌ನಲ್ಲಿ ವ್ಯವಹರಿಸಿ, ಫೋನ್‌ಪೇ ಕ್ಯೂಆರ್ ಕೋಡ್ ಕಳುಹಿಸಿ ಹಣ ವರ್ಗಾಯಿಸಿಕೊಳ್ಳಲಾಗುತ್ತಿತ್ತು.  ಹಣ ಪಡೆದ ಬಳಿಕ ನಕಲಿ ರಶೀದಿಗಳನ್ನು ನೀಡಿ, ದೇವಳದ ಕೊಠಡಿಗಳು ಬುಕ್ ಆಗಿವೆ ಎಂದು ಭಕ್ತರನ್ನು ನಂಬಿಸಿ ಹಣ ವಸೂಲಿ ಮಾಡಲಾಗುತ್ತಿತ್ತು. ಈ ಗಂಭೀರ ವಂಚನೆ ಪ್ರಕರಣದ ಕುರಿತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ (56) ಅವರು ನೀಡಿದ ದೂರಿನ ಮೇರೆಗೆ, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 55/2026ರ ಅನ್ವಯ IT Act ಕಲಂ 66(c) ಹಾಗೂ BNS ಕಲಂ 318 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!