BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

udupi ಕಾರ್ಕಳದ ಸಾಣೂರು ಬಳಿ ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ,ರೈ ಸೇರಿ ಹಲವಾರು ಗಾಯ..!


ಉಡುಪಿ, ಸೆ 20 :ಕಾರ್ಕಳದ ಸಾಣೂರು ಬಳಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ದಾರುಣ ಘಟನೆ ವರದಿಯಾಗಿದೆ.

ಭಾನುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಕಾರ್ಯಕ್ರಮ ನಿಮಿತ್ತ ಕಾರ್ಕಳಕ್ಕೆ ಆಗಮಿಸುತ್ತಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕಾರು ಹಾಗೂ ಕಾರ್ಕಳದಿಂದ ಮೂಡುಬಿದಿರೆ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ‘ವಿಶಾಲ್’ ಖಾಸಗಿ ಬಸ್ ನಡುವೆ ಸಾಣೂರು ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಹಾಗೂ ಬಸ್‌ನಲ್ಲಿದ್ದ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನೆಲ್ಲರೂ ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ತಿಳಿಯುತ್ತಿದ್ದಂತೆ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕಾಂಗ್ರೆಸ್ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸುಧಾಕರ್ ಶೆಟ್ಟಿ ಸೇರಿದಂತೆ ಹಲವು ಪ್ರಮುಖರು ಆಸ್ಪತ್ರೆಗೆ ದಾವಿಸಿ, ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಇತರೆ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.


https://youtu.be/PAq6gBAiwKQ

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!