BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Ullala ಉಳ್ಳಾಲ ಅಳಿವೆ ಬಾಗಿಲಲ್ಲಿ ಬಲವಾದ ಅಲೆಗಳ ಅಬ್ಬರಕ್ಕೆ ಮುಳುಗಿದ ಮೀನುಗಾರಿಕಾ ಬೋಟ್; ಐವರು ಮೀನುಗಾರರು ಸುರಕ್ಷಿತ ಪಾರು.!


 ಉಳ್ಳಾಲ, ಸೆಪ್ಟೆಂಬರ್ 03 : ಉಳ್ಳಾಲ ಅಳಿವೆ ಬಾಗಿಲಲ್ಲಿ ಬಲವಾದ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟೊಂದು ಮುಳುಗಡೆಯಾಗಿದ್ದು ಲಕ್ಷಾಂಥರ ರೂಪಾಯಿಗಳ ನಷ್ಟ ಸಂಭವಿಸಿದೆ. ಮಂಗಳವಾರ ಸಂಜೆ ಉಳ್ಳಾಲ ಅಳಿವೆ ಸಮೀಪ ಸಮುದ್ರದ ಬಲವಾದ ಅಲೆಗಳ ಅಬ್ಬರಕ್ಕೆ ಸಿಲುಕಿ ಶರೀಫ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ಸಮೀಪದಲ್ಲಿದ್ದ ಮತ್ತೊಂದು ಬೋಟ್‌ನವರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮೀನುಗಾರಿಕೆಗೆ ತೆರಳಿದ ಕೆಲವೇ ಸಮಯದಲ್ಲಿ ಬೋಟ್ ಅಲೆಗಳ ಅಘಾತಕ್ಕೆ ಸಿಲುಕಿ ಮುಳುಗಿದ್ದು, ಇದರಿಂದ ಭಾರೀ ಆರ್ಥಿಕ ನಷ್ಟ ಉಂಟಾಗಿದೆ ಎಂದು ಮಾಲೀಕ ಶರೀಫ್ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕರ್ನಾಟಕ ಕರಾವಳಿಯಲ್ಲಿ ಕಳೆದ ಒಂದು ವಾರದಿಂದ  ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ವೈಪರಿತ್ಯದಿಂದಾಗಿ ನಿರಂತರ ದೋಣಿ ದುರಂತಗಳು ಸಂಭವಿಸುತ್ತಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!