BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

VHP ಬಂಟ್ವಾಳ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: ಜಾಮೀನು ಪಡೆದ ಹಿಂದೂ ಕಾರ್ಯಕರ್ತರ ಮೇಲೆ 'ಗೂಂಡಾ ಕಾಯ್ದೆ' ಪ್ರಯೋಗ - VHP ತೀವ್ರ ವಿರೋಧ


ಮಂಗಳೂರು,ಸೆ 19 : ಬಂಟ್ವಾಳದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಮೈಸೂರಿನ ಕೋಕಾ (KCOCA) ವಿಶೇಷ ನ್ಯಾಯಾಲಯವು ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ, ನ್ಯಾಯಾಲಯದ ಆದೇಶ ಹೊರಬಿದ್ದು ಸತ್ಯಕ್ಕೆ ಜಯ ಸಿಕ್ಕಿದ ಕೆಲವೇ ಗಂಟೆಗಳಲ್ಲಿ, ಭರತ್, ಶಿವಪ್ರಸಾದ್, ಪ್ರದೀಪ್, ರಂಜಿತ್, ಅಭಿನ್ ಮತ್ತು ತೇಜಕ್ಷಾ ಅವರ ಮೇಲೆ ಮತ್ತೆ 'ಗೂಂಡಾ ಕಾಯ್ದೆ' (Goonda Act) ಜಾರಿಗೊಳಿಸಿ ಪುನಃ ಜೈಲಿಗಟ್ಟಲಾಗಿದೆ.

ನ್ಯಾಯಾಲಯದ ಆದೇಶಕ್ಕೂ ಬೆಲೆ ನೀಡದೆ, ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಕರಾಳ ಸಂಚು ರೂಪಿಸುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಹಿಂದೂ ದಮನ ನೀತಿ ಹಾಗೂ ಪೊಲೀಸ್ ದೌರ್ಜನ್ಯದ ವಿರುದ್ಧ ತುಳುನಾಡಿನ ಪ್ರತಿಯೊಬ್ಬ ಹಿಂದೂ ನಾಗರಿಕರು ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಸರ್ಕಾರದ ಈ ದಬ್ಬಾಳಿಕೆಯ ಧೋರಣೆಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಬೃಹತ್ ಜನಾಂದೋಲನವನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಹೆಚ್‌ಪಿ ಮುಖಂಡ ಶರಣ್ ಪಂಪ್ವೆಲ್  ಎಚ್ಚರಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!