BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Vitla Crime ವಿಟ್ಲ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ - ಮೂವರು ಆರೋಪಿಗಳ ಬಂಧನ


ವಿಟ್ಲ, ಸೆಪ್ಟೆಂಬರ್ 08 : ಬಾಲಕನೊಬ್ಬನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ಘಟನೆಯ ವಿವರ:

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕ ನೀಡಿದ ದೂರಿನನ್ವಯ, 2026ನೇ ಸಾಲಿನ ಫೆಬ್ರವರಿ ತಿಂಗಳಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಜವಾದ್, ಶಾಹಿದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಆರೋಪಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸೆಪ್ಟೆಂಬರ್ 04, 2026ರಂದು ದೂರು ದಾಖಲಿಸಿದ್ದರು.

ಬಾಲಕನ ದೂರಿನ ಆಧಾರದ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 185/2026, 186/2026, 187/2026, 188/2026, 189/2026 ಹಾಗೂ 190/2026 ರನ್ವಯ, ಕಲಂ: 4(2), 5(m), 6, 8 ಪೋಕ್ಸೋ ಕಾಯ್ದೆ 2012ರ ಅಡಿಯಲ್ಲಿ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳ ಪೈಕಿ ಜವಾದ್, ಶಹೀದ್ ಹಾಗೂ ರಿಯಾಝ್ @ ಅಬ್ದುಲ್ ಗಫೂರ್ ಅವರನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!