ಬೆಳ್ತಂಗಡಿ: ಅ.01. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿತ್ತು.
ಸಾರ್ವಜನಿಕರ ಸಮಸ್ಯೆಯನ್ನು ಮನಗಂಡು ರೂ.25 ಲಕ್ಷ ಅನುದಾನವನ್ನು ಮೀಸಲಿಟ್ಟು ರಸ್ತೆಯ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಾನಿಗೊಳಗಾದ ರಸ್ತೆ ಭಾಗಗಳನ್ನು ದುರಸ್ತಿಪಡಿಸುವ ಕಾಮಗಾರಿ ಇದೀಗ ಪ್ರಗತಿಯಲ್ಲಿದೆ.
ರಸ್ತೆಯ ದುರಸ್ತಿಗೆ ತುರ್ತಾಗಿ ಸ್ಪಂದಿಸಿ ಅನುದಾನ ಒದಗಿಸಿದ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರಿಗೆ ಸ್ಥಳೀಯ ಸಾರ್ವಜನಿಕರು ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.
