ಮಂಗಳೂರು, ಅ.02: ಕಾರ್ಯಾಚರಣೆಯ ಅಡಚಣೆಗಳ ಕಾರಣದಿಂದಾಗಿ ನೈಋತ್ಯ ರೈಲ್ವೆಯು ಕೆಲವು ರೈಲುಗಳ ಸೇವೆಯನ್ನು ಮಾರ್ಗಮಧ್ಯೆ ನಿಯಂತ್ರಿಸಲು ನಿರ್ಧರಿಸಿದೆ.
ಅಕ್ಟೋಬರ್ 3ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 25 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು (ವಿಳಂಬವಾಗಲಿದೆ).
ಅದೇ ರೀತಿ, ಅಕ್ಟೋಬರ್ 4ರಂದು ಮಂಗಳೂರು ಜಂಕ್ಷನ್‌ನಿಂದ ಹೊರಡುವ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.