BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

MRPL Blast ಮಂಗಳೂರು ಎಂಆರ್‌ಪಿಎಲ್ ಸ್ಫೋಟ ಪ್ರಕರಣ ; ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ.ಖಾದರ್ ಸೂಚನೆ

ಮಂಗಳೂರು, ಅ.01: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ನಗರದ ವೆನ್ಲಾಕ್ ಆಸ್ಪತ್ರೆಯ ಬಳಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆದುಕೊಂಡಿದ್ದು, ಗುರುವಾರವೇ ತನಿಖಾಧಿಕಾರಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದರು.

ಪ್ರವಾಸ ಮೊಟಕುಗೊಳಿಸಿ ಆಗಮನ; ಸಂತ್ರಸ್ತರಿಗೆ ಸಾಂತ್ವನ

ಘಟನಾ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸುವಂತೆ ಹಾಗೂ ಸಂತ್ರಸ್ತರಿಗೆ ಸಾಂತ್ವನ ಹೇಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಾನು ತುರ್ತಾಗಿ ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳೂರಿಗೆ ಆಗಮಿಸಿರುವುದಾಗಿ ಸಚಿವರು ಸ್ಪಷ್ಟಪಡಿಸಿದರು.

ಎಂಆರ್‌ಪಿಎಲ್ ಅಧಿಕಾರಿಗಳ ವಿರುದ್ಧ ಅಸಮಾಧಾನ

ಈ ದುರ್ಘಟನೆಯ ಮಧ್ಯೆ ಎಂಆರ್‌ಪಿಎಲ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಸಂತ್ರಸ್ತರ ಜೊತೆ ಮಾತನಾಡದಿರುವ ವಿಷಯ ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ ಸಚಿವರು, ಇದು ಸರಿಯಲ್ಲ ಎಂದರು. "ಮೃತ ಯುವಕನ ಕುಟುಂಬ ಹಾಗೂ ಗಾಯಗೊಂಡವರ ಜೊತೆ ಕಂಪನಿಯ ಅಧಿಕಾರಿಗಳು ಮಾತನಾಡಬೇಕಿತ್ತು. ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲು ಎಂಆರ್‌ಪಿಎಲ್ ಸಂಸ್ಥೆಯ ಜೊತೆ ಮಾತುಕತೆ ನಡೆಸಲಾಗುವುದು" ಎಂದು ಹೇಳಿದರು.

ನಷ್ಟ ಪರಿಹಾರಕ್ಕೆ ನಿರ್ದೇಶನ

ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳು ಹಾಗೂ ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸಮಗ್ರ ತನಿಖೆ ನಡೆಸಿ, ಆಗಿರುವ ನಷ್ಟಕ್ಕೆ ಎಂಆರ್‌ಪಿಎಲ್ ಸಂಸ್ಥೆಯಿಂದಲೇ ಸೂಕ್ತ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಯು.ಟಿ.ಖಾದರ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಎಂ ಆರ್‌ಪಿ ಎಲ್ ಸ್ಪೋಟದ ಪರಿಣಾಮ MRPL ಸ್ಫೋಟದ ಪರಿಣಾಮ ಜೋಕಟ್ಟೆಯಲ್ಲಿ 25, ಕಳವಾರಿನಲ್ಲಿ 19, ಬಾಳದಲ್ಲಿ 10 ಮನೆಗಳಿಗೆ ಹಾನಿ ಸಂಭವಿಸಿದೆ. ಜೊತೆಗೆ ಚರ್ಚ್, ಮಸೀದಿ, ದೇವಸ್ಥಾನ ಸೇರಿ ಜೋಕಟ್ಟೆಯಲ್ಲಿ 5 ಮತ್ತು ಕಳವಾರಿನಲ್ಲಿ3 ಒಟ್ಟು 8 ಪ್ರಾರ್ಥನ ಮಂದಿಗಳು ಹಾನಿಗೊಳಗಾಗಿವೆ.    


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!