BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Mysuru ಮೈಸೂರು ವಿಭಾಗದಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ; ಸ್ವಚ್ಛತಾ ಹಿ ಸೇವಾ 2026 ಸಮಾರೋಪ

ಮೈಸೂರು, ಅ.02: ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ 02.10.2026ರಂದು ಮೈಸೂರು ಗಾಂಧೀ ಭವನದಲ್ಲಿ ಗಾಂಧೀ ಜಯಂತಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಹಿ ಸೇವಾ 2026 ಅಭಿಯಾನದ ಸಮಾರೋಪ ಕಾರ್ಯಕ್ರಮ ನಡೆಯಿತು.

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ  ಮುದಿತ್ ಮಿತ್ತಲ್ ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಗೌರವ ಸಲ್ಲಿಸಿ, ಸ್ವಚ್ಛತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಪ್ರತಿಯೊಬ್ಬರ ಸಹಭಾಗಿತ್ವದ ಮಹತ್ವವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಸ್ವಚ್ಛತಾ ಹಿ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ ರೈಲ್ವೆ ಸಿಬ್ಬಂದಿ, ಸಫಾಯಿ ಮಿತ್ರರು ಹಾಗೂ ಲಲಿತಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. 17.09.2026ರಿಂದ 02.10.2026ರವರೆಗೆ "ಸ್ವಚ್ಛತೆಯಲ್ಲಿ ಸಹಭಾಗಿ, ಸ್ವಚ್ಛ ಭಾರತ, ವಿಕಸಿತ ಭಾರತ" ಎಂಬ ಘೋಷವಾಕ್ಯದಡಿ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಮೈಸೂರು ವಿಭಾಗದಾದ್ಯಂತ ಹಮ್ಮಿಕೊಳ್ಳಲಾಯಿತು. ಅಭಿಯಾನದಡಿ ಒಟ್ಟು 852 ಸ್ವಚ್ಛತಾ ಗುರಿ ಘಟಕಗಳನ್ನು ಗುರುತಿಸಿ ಸ್ವಚ್ಛಗೊಳಿಸಿ ಪೂರ್ಣಗೊಳಿಸಲಾಯಿತು. ವಿವಿಧ ಚಟುವಟಿಕೆಗಳಲ್ಲಿ ಸುಮಾರು 2,500 ಮಂದಿ ಭಾಗವಹಿಸಿದರು.

ತ್ಯಾಜ್ಯ ವಿಂಗಡಣೆ, ಘನ ತ್ಯಾಜ್ಯ ನಿರ್ವಹಣಾ ನಿಯಮಗಳು 2026, ನೀರಿನ ಸಂರಕ್ಷಣೆ ಹಾಗೂ ಏಕಬಳಕೆಯ ಪ್ಲಾಸ್ಟಿಕ್ ತ್ಯಜಿಸುವ ಕುರಿತು ವಿವಿಧ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. 292 ಸಫಾಯಿ ಮಿತ್ರರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನ ದೊರೆಯಿತು.

01.10.2026ರಂದು ಮೈಸೂರು ರೈಲು ನಿಲ್ದಾಣದಲ್ಲಿ “ಒಂದು ದಿನ, ಒಂದು ಗಂಟೆ, ಒಟ್ಟಾಗಿ” ಎಂಬ ಆಶಯದಡಿ ಸಾಮೂಹಿಕ ಶ್ರಮದಾನ ನಡೆಸಲಾಯಿತು. ಇದರಲ್ಲಿ ಸುಮಾರು 320 ಅಧಿಕಾರಿಗಳು, ಮೇಲ್ವಿಚಾರಕರು ಮತ್ತು ಸಿಬ್ಬಂದಿ ಭಾಗವಹಿಸಿದರು.

02.10.2026ರಂದು ಕಾರ್ಯಕ್ರಮದ ನಂತರ ಮೈಸೂರು ಚಾಮುಂಡಿ ಕ್ಲಬ್‌ನ ಅಧಿಕಾರಿಗಳ ಕಾಲೋನಿಯಲ್ಲಿ  ಮುದಿತ್ ಮಿತ್ತಲ್, ಡಿಆರ್‌ಎಂ ಮೈಸೂರು, ಶಾಖಾಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಮಾರೋಪ ಕಾರ್ಯಕ್ರಮದಲ್ಲಿ ಶಾಖಾಧಿಕಾರಿಗಳು, ರೈಲ್ವೆ ಸಿಬ್ಬಂದಿ, ಸ್ಕೌಟ್ಸ್ ಮತ್ತು ಗೈಡ್ಸ್, ಸಫಾಯಿ ಮಿತ್ರರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸ್ವಚ್ಛ ಮತ್ತು ಹಸಿರು ರೈಲ್ವೆ ಪರಿಸರ ನಿರ್ಮಾಣಕ್ಕೆ ಮೈಸೂರು ವಿಭಾಗ ನಿರಂತರವಾಗಿ ಬದ್ಧವಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!