BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಕುಂದಾಪುರದಲ್ಲಿ ಕಾರಿನಲ್ಲಿ ಬೀಡಾಡಿ ದನ ಅಪಹರಿಸಿದ್ದ ಪ್ರಮುಖ ಆರೋಪಿ ಕೊಲ್ಲೂರು ಪೊಲೀಸರ ಬಲೆಗೆ


ಉಡುಪಿ, ಅ.02: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದಮನೆ ನಿವಾಸಿ ಮುಹಮ್ಮದ್ ಸಿನಾನ್ (20) ಬಂಧಿತ ಆರೋಪಿ. ಆತನಿಂದ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ:

ಸೆಪ್ಟೆಂಬರ್ 29ರಂದು ಮಧ್ಯಾಹ್ನ 1.30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಅಪರಿಚಿತ ಕಳ್ಳರ ಗುಂಪು ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದು ಕಾರಿನೊಳಗೆ ತುಂಬಿಕೊಂಡು ಪರಾರಿಯಾಗಿತ್ತು. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದವು. ಸ್ಥಳೀಯರು ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ:

ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮಾರ್ಗದರ್ಶನ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಉಸ್ತುವಾರಿಯಲ್ಲಿ ಕೊಲ್ಲೂರು ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ, ಸಿಬ್ಬಂದಿಗಳಾದ ನಾಗೇಂದ್ರ, ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ್ ಹಾಗೂ ನಾಗರಾಜ ಅವರನ್ನೊಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಮತ್ತಿಬ್ಬರಿಗೆ ಶೋಧ, 5 ಪ್ರಕರಣಗಳಲ್ಲಿ ಭಾಗಿ:

ಪ್ರಕರಣದಲ್ಲಿ ಇನ್ನು ಇಬ್ಬರು ಆರೋಪಿಗಳು ಭಾಗಿಯಾಗಿದ್ದು, ಅವರನ್ನು ಶೀಘ್ರವೇ ಪತ್ತೆಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಮುಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 5 ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!