BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Bantwal ಅಪ್ರಾಪ್ತರ ಕೈಗೆ ವಾಹನ ಕೊಡುವಾಗ ಹತ್ತು ಬಾರಿ ಯೋಚಿಸಿ, ಬಂಟ್ವಾಳದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; 9ನೇ ತರಗತಿ ವಿದ್ಯಾರ್ಥಿ ದುರ್ಮರಣ..!

ಬಂಟ್ವಾಳ,ನ.15 : ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಬೆಂಜನಪದವು ಸಮೀಪದ ಕಲ್ಹಣೆ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್. (14) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಡೊಮಿನಿಕ್ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ನ. 14ರಂದು ರಾತ್ರಿ ಸುಮಾರು 9 ಗಂಟೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದ ವೇಳೆ, ಕಲ್ಹಣೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನ. 15ರಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾನೆ.


ರಸ್ತೆ ಬದಿಯಲ್ಲಿ ಕೆಟ್ಟು ನಿಲ್ಲುವ ವಾಹನಗಳ ಸುರಕ್ಷತಾ ಕ್ರಮಗಳ ಕೊರತೆ ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ನೀಡುವ ಅಪಾಯದ ಕುರಿತು ಈ ದುರಂತ ಮತ್ತೊಮ್ಮೆ ಗಂಭೀರ ಎಚ್ಚರಿಕೆ ನೀಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ದುರ್ಮರಣ

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!