BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಕರ್ನಾಟಕ

Bengaluru ಬೆಳಗ್ಗೆ ಪ್ರೀತಿ, ರಾತ್ರಿ ಕುಡಿದು ಕಿರುಕುಳ; ನಿತ್ಯ ನರಕ ತಾಳಲಾರದೆ ಪತಿಯ ಎದೆಗೆ ಚಾಕು ಇರಿದ ಪತ್ನಿ..!


ಬೆಂಗಳೂರು, ನ.12: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಪ್ರತಿದಿನ ರಾತ್ರಿ ಮದ್ಯದ ನಶೆಯಲ್ಲಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಗರದ ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿ ನಡೆದಿದೆ.

ಖಾಸಗಿ ಬ್ಯಾಂಕಿನ ಸಾಲ ವಿಭಾಗದಲ್ಲಿ (Loan Department) ಕಾರ್ಯನಿರ್ವಹಿಸುತ್ತಿದ್ದ ರಾಜಶೇಖರ್ (44) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಪತ್ನಿ ಮಾಲಾಶ್ರೀ (35) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಘಟನೆಯ ಹಿನ್ನೆಲೆ:

ಬೆಳಗಿನ ವೇಳೆ ಪತ್ನಿಯನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ರಾಜಶೇಖರ್, ರಾತ್ರಿಯಾಗುತ್ತಿದ್ದಂತೆ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿದಿನ ರಾತ್ರಿ ಪತ್ನಿಯೊಂದಿಗೆ ಜಗಳ ತೆಗೆದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.


ಕಳೆದ ರಾತ್ರಿಯೂ ಎಂದಿನಂತೆ ಮದ್ಯ ಸೇವಿಸಿ ಮನೆಗೆ ಬಂದ ರಾಜಶೇಖರ್, ಇದೇ ವಿಚಾರವಾಗಿ ಮತ್ತೆ ಜಗಳ ಪ್ರಾರಂಭಿಸಿದ್ದಾರೆ. ಪರಸ್ಪರ ವಾಗ್ವಾದ ವಿಕೋಪಕ್ಕೆ ತಿರುಗಿದಾಗ ತೀವ್ರ ಆಕ್ರೋಶಗೊಂಡ ಮಾಲಾಶ್ರೀ, ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತಿಯ ಎದೆಗೆ ಬಲವಾಗಿ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಕುಸಿದುಬಿದ್ದ ರಾಜಶೇಖರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ‘ರಾತ್ರಿ ಹಾಜರಾತಿ’ ಕಡ್ಡಾಯ: ಕೇಂದ್ರ ಸ್ಥಾನ ಬಿಟ್ಟರೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಆರೋಗ್ಯ ಇಲಾಖೆ

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೆಂಪೇಗೌಡ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!