BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಕರ್ನಾಟಕ

Bengaluru ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸಚಿವ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ಮಹತ್ವದ ಪ್ರಗತಿ ಪರಿಶೀಲನಾ ಸಭೆ


ಬೆಂಗಳೂರು,ನ.17 : ಆರೋಗ್ಯ ಸಚಿವರಾದ ಯು ಟಿ ಖಾದರ್ ಅವರು ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳು (DHO), ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ವಿವಿಧ ಕಾರ್ಯಕ್ರಮಗಳ ಉಪನಿರ್ದೇಶಕರೊಂದಿಗೆ (DD) ನಗರದ ಆರೋಗ್ಯ ಸೌಧದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರತಿ ಕಾರ್ಯಕ್ರಮವು ಯಾವ ಜಿಲ್ಲೆಯಲ್ಲಿ ಎಷ್ಟರ ಮಟ್ಟಿಗೆ ಮತ್ತು ಹೇಗೆ ಜಾರಿಯಾಗಿದೆ ಎಂಬುದರ ಕುರಿತು ಜಿಲ್ಲಾವಾರು ಪರಿಶೀಲನೆ ನಡೆಸಲಾಯಿತು. ಇದೇ ವೇಳೆ ಅಧಿಕಾರಿಗಳಿಂದ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ಪಡೆಯಲಾಯಿತು. ಅಲ್ಲದೆ, ಉತ್ತಮ ಕಾರ್ಯನಿರ್ವಹಣೆ ತೋರಿರುವ ಜಿಲ್ಲೆಗಳ ಮಾದರಿಗಳನ್ನು (Best Practices) ಇತರ ಜಿಲ್ಲೆಗಳಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಸಮಾಲೋಚಿಸಲಾಯಿತು.

ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವ ಯು ಟಿ ಖಾದರ್ , "ಪ್ರತಿಯೊಬ್ಬರಿಗೂ ಗುಣಮಟ್ಟದ ಚಿಕಿತ್ಸೆ ಸಕಾಲದಲ್ಲಿ ತಲುಪಬೇಕು ಮತ್ತು ಇಲಾಖೆಯ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ಯಾವುದೇ ಅಡೆತಡೆಯಿಲ್ಲದೆ ಸಿಗುವಂತಾಗಬೇಕು. ಮುಂದಿನ ದಿನಗಳಲ್ಲಿ ಎಲ್ಲಾ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಜಾರಿಗೊಳಿಸಬೇಕು. ಜಿಲ್ಲೆಗಳಲ್ಲಿ ಯಾವುದೇ ಕೊರತೆಗಳಿದ್ದರೆ ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು" ಎಂದು ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಭಿಯಾನ ನಿರ್ದೇಶಕರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ..

ಕಾರ್ಮೆಲ್ ಶಾಲೆಯ ವಿದ್ಯಾರ್ಥಿನಿಯಿಂದ ಸಾಹಿತ್ಯ ಲೋಕಕ್ಕೆ ಮೊದಲ ಹೆಜ್ಜೆ: 7ನೇ ತರಗತಿ ವಿದ್ಯಾರ್ಥಿನಿ ವಿಯಾ ಸಾಯಿ ಅವರ ಚೊಚ್ಚಲ ಕವನ ಸಂಕಲನ ಲೋಕಾರ್ಪಣೆ


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!