BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಕರ್ನಾಟಕ

Chikkaballapur Accident ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಕಾರು-ಬೊಲೆರೊ ನಡುವೆ ಭೀಕರ ಅಪಘಾತ; ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ.!

ಚಿಕ್ಕಬಳ್ಳಾಪುರ, ನ.18: ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ಕಾರು ಮತ್ತು ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.


ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆಯ ಎದುರಿನಲ್ಲೇ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಮತ್ತೊಬ್ಬ ಯುವಕನ ಸ್ಥಿತಿ ಅತ್ಯಂತ ಗಂಭೀರವಾಗಿದೆ.

ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು.

ನಂದಿಗಿರಿಧಾಮ ಪೊಲೀಸ್ ಠಾಣೆ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.


ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.


ಘಟನೆ ನಡೆದ ತಕ್ಷಣ ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕನನ್ನು ತಕ್ಷಣವೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮಂಗಳೂರು: ಮತ್ತೊಂದು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೊ ಅರೆಸ್ಟ್.!

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!