BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

H D Kumaraswamy ಕರಾವಳಿಯಲ್ಲಿ ಹೆಚ್‌ಡಿಕೆ ಟೆಂಪಲ್‌ ರನ್ ಕೊಲ್ಲೂರು, ಕಾಪು ದೇವಳಗಳಿಗೆ ಭೇಟಿ

ಉಡುಪಿ, ನ.16 : ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಮುಂಜಾನೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

 

ಪುತ್ರ , ಸೊಸೆ ಮತ್ತು ಪತ್ನಿಯೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಅವರು, ಸುಮಾರು ನಾಲ್ಕು ವರ್ಷಗಳ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಹಾಗೂ ದೋಷ ಪರಿಹಾರಕ್ಕಾಗಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ನವಚಂಡಿಕಾಯಾಗದಲ್ಲಿ ಪಾಲ್ಗೊಂಡು ಸಂಕಲ್ಪ ವಿಧಿ ನೆರವೇರಿಸಿದರು. 

 ಕುಟುಂಬದ ದೋಷ ಪರಿಹಾರ ಮತ್ತು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹರಕೆಗಳನ್ನು ತೀರಿಸುವ ಉದ್ದೇಶದಿಂದ ಈ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ 6 ಗಂಟೆಗೆ ಆರಂಭವಾದ ನವಚಂಡಿಕಾ ಯಾಗವು ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿಯೊಂದಿಗೆ ಮುಕ್ತಾಯಗೊಂಡಿತು. ಈ ವೇಳೆ ಕುಟುಂಬದ ಸದಸ್ಯರು ಯಾಗದಲ್ಲಿ ಪೂರ್ಣವಾಗಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಕೃಪೆಗೆ ಪಾತ್ರರಾದರು. ಈ ಭೇಟಿಯು ಅವರ ಕರಾವಳಿ ಜಿಲ್ಲೆಗಳ ದೇವಾಲಯ ಯಾತ್ರೆಯ ಪ್ರಮುಖ ಭಾಗವಾಗಿತ್ತು.


ಬಳಿಕ ಮಧ್ಯಾಹ್ನ 12:30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ದಕ್ಷಿಣ ಕನ್ನಡ ಜಿಲ್ಲೆಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಸಂಸ್ಕೃತಿ, ಹಬ್ಬ ಜಾತ್ರೆಗಳು ಉಳಿಯಬೇಕು- ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬ: ಸಿಎಂ ಡಿ ಕೆ ಶಿವಕುಮಾರ್

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!