BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಕರ್ನಾಟಕ

Mandya ಮಂಡ್ಯ: ರೈಲ್ವೆ ಗೇಟ್ ನಿರ್ಲಕ್ಷಿಸಿ ಹಳಿ ದಾಟುವಾಗ ದುರಂತ; ಯುವತಿ ಸ್ಥಳದಲ್ಲೇ ಸಾವು


ಮಂಡ್ಯ, ನ.15; ರೈಲ್ವೆ ಗೇಟ್ ಹಾಕಿದ್ದರೂ ಅದನ್ನು ಲೆಕ್ಕಿಸದೆ ಹಳಿ ದಾಟಲು ಯತ್ನಿಸಿದ 19 ವರ್ಷದ ಯುವತಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮೃತ ಯುವತಿಯನ್ನು ಚಂದಗಿರಿಕೊಪ್ಪಲು ಗ್ರಾಮದ ನಿವಾಸಿ ಲಿಖಿತಾ (19) ಎಂದು ಗುರುತಿಸಲಾಗಿದೆ. ಗ್ರಾಮದ ಸಮೀಪವಿರುವ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ರೈಲು ಬರುತ್ತಿದ್ದ ಹಿನ್ನೆಲೆಯಲ್ಲಿ ಗೇಟ್ ಹಾಕಲಾಗಿತ್ತು. ಆದರೆ, ಗೇಟ್ ತೆರೆಯುವವರೆಗೂ ಕಾಯದೆ ಲಿಖಿತಾ ಹಳಿ ದಾಟಲು ಮುಂದಾಗಿದ್ದು, ಈ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ. ಈ ಭೀಕರ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಬೆಳಗಾವಿ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ದುರ್ಮರಣ

ಅಪಘಾತದ ತೀವ್ರತೆಗೆ ಯುವತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ..

"ರೀಲ್ಸ್‌ಗಳಲ್ಲಿ ಅಲ್ಲ, ದಾಖಲೆಗಳೊಂದಿಗೆ ನೇರ ಚರ್ಚೆಗೆ ಬನ್ನಿ" ಪುತ್ತೂರು ಶಾಸಕರಿಗೆ ಆದೇಶ್ ಶೆಟ್ಟಿ ಆಹ್ವಾನ.!

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!