BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಳ್ಳಾಲ

Mangaluru SDPI Protest ಜ್ಞಾನೇಶ್ ಕುಮಾರ್ ರನ್ನು ವಜಾಗೊಳಿಸಿ, SIR ಪ್ರಕ್ರಿಯೆ ರದ್ದುಗೊಳಿಸಲು ಆಗ್ರಹಿಸಿ ನಾಳೆ ದೇರಳಕಟ್ಟೆಯಲ್ಲಿ ಬೃಹತ್ ‘ಜಂತರ್ ಮಂತರ್’ ಪ್ರತಿಭಟನಾ ಧರಣಿ

ಮಂಗಳೂರು, ನ. 12: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ನವೆಂಬರ್ 13ರಂದು ದೇರಳಕಟ್ಟೆ ಜಂಕ್ಷನ್‌ನಲ್ಲಿ ಬೃಹತ್ ‘ಜಂತರ್ ಮಂತರ್’ ಪ್ರತಿಭಟನಾ ಧರಣಿ ಆಯೋಜಿಸಲಾಗಿದೆ.

ನಾಳೆ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪ್ರತಿಭಟನಾ ಧರಣಿ ನಡೆಯಲಿದೆ.

ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗಾಗಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಯಾವುದೇ ಅಡೆತಡೆಯಿಲ್ಲದೆ ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಅವಕಾಶ ಮತ್ತು ಭರವಸೆ ಇರಬೇಕು. ಮತದಾರರ ಹಕ್ಕುಗಳಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಚುನಾವಣಾ ಪ್ರಕ್ರಿಯೆ ನಡೆಯಬೇಕು ಎಂಬುದು ಈ ಹೋರಾಟದ ಪ್ರಮುಖ ಆಶಯವಾಗಿದೆ.

ಈ ಪ್ರತಿಭಟನಾ ಧರಣಿಯಲ್ಲಿ ಪಕ್ಷದ ಕಾರ್ಯಕರ್ತರು, ಪ್ರಜಾಪ್ರಭುತ್ವ ಪರ ಹೋರಾಟಗಾರರು, ವಿವಿಧ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ SDPI ಮನವಿ ಮಾಡಿದೆ.

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸಲು ಎಸ್‌ಡಿಪಿಐ ನಿಂದ ಮುಂದುವರಿದ ಹೋರಾಟ: ಪೋಸ್ಟರ್ ಅಭಿಯಾನ ನಡೆಸಿ ಪ್ರಾಧಿಕಾರ ಹಾಗೂ ಸರಕಾರಕ್ಕೆ ತೀವ್ರ ಎಚ್ಚರಿಕೆ

"ಮತದಾನದ ಹಕ್ಕು ನಮ್ಮ ಹಕ್ಕು, ಪ್ರಜಾಪ್ರಭುತ್ವದ ರಕ್ಷಣೆ ನಮ್ಮ ಕರ್ತವ್ಯ" ಎಂಬ ಆಶಯದೊಂದಿಗೆ ನಡೆಯುವ ಈ ಜನಾಂದೋಲನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!