BREAKING
[ಹೋಮ್] ಕರ್ನಾಟಕ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಟ್ರಕ್‌ಗೆ ಬೈಕ್ ಹ್ಯಾಂಡಲ್ ತಗುಲಿ ದುರಂತ: ಉದ್ಯೋಗ ನಿಮಿತ್ತ ಬೆಂಗಳೂರಿನೆ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಮೃತ್ಯು..!

ಚನ್ನರಾಯಪಟ್ಟಣ, ನ.15 : ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ಚುಂಗಿಗುಡ್ಡೆಯ ಯುವ ಇಂಜಿನಿಯರ್ ಅಕ್ಷಯ್ ಎನ್. ಹೆಬ್ಬಾರ್ (26) ಅವರು ಚನ್ನರಾಯಪಟ್ಟಣ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.


ನಾಡ-ಪಡುಕೋಣೆ ಸಮೀಪದ ಚುಂಗಿಗುಡ್ಡೆಯ ಕೃಷಿಕ ಹಾಗೂ ಎಲ್‌ಐಸಿ ಏಜೆಂಟ್ ನಾರಾಯಣ ಹೆಬ್ಬಾರ್ ಅವರ ಪುತ್ರರಾದ ಅಕ್ಷಯ್, ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ನಸುಕಿನ 4 ಗಂಟೆಗೆ ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದ ಅವರು, ಚನ್ನರಾಯಪಟ್ಟಣ ಸಮೀಪ ಟ್ರಕ್‌ವೊಂದಕ್ಕೆ ಬೈಕ್ ಹ್ಯಾಂಡಲ್ ತಗುಲಿ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಪ್ರತಿಭಾವಂತ ಯುವಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹುಟ್ಟೂರು ಚುಂಗಿಗುಡ್ಡೆ ಮತ್ತು ಪಡುಕೋಣೆಯಲ್ಲಿ ಶೋಕದ ಛಾಯೆ ಆವರಿಸಿದೆ. ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ..

ಅಪ್ರಾಪ್ತರ ಕೈಗೆ ವಾಹನ ಕೊಡುವಾಗ ಹತ್ತು ಬಾರಿ ಯೋಚಿಸಿ, ಬಂಟ್ವಾಳದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; 9ನೇ ತರಗತಿ ವಿದ್ಯಾರ್ಥಿ ದುರ್ಮರಣ..!

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!