ಉಡುಪಿ, ನ.13: ಭೂಗತ ಪಾತಕಿ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಮೃತರು ರವಿ ಪೂಜಾರಿ ಸೇರಿದಂತೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನಾಳೆ (ನವೆಂಬರ್ 14) ಬೆಳಿಗ್ಗೆ 9:30ಕ್ಕೆ ಮಲ್ಪೆಯ ನೆರ್ಗಿಯಲ್ಲಿರುವ ಅವರ ಹಿರಿಯ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಂತ್ಯಸಂಸ್ಕಾರಕ್ಕೆ ರವಿ ಪೂಜಾರಿಯನ್ನು ಕರೆತರಲು ಯತ್ನ:
ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ರವಿ ಪೂಜಾರಿಯನ್ನು ತಾಯಿಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಉಡುಪಿಗೆ ಕರೆತರಲು ಕುಟುಂಬಸ್ಥರು ಪ್ರಯತ್ನ ನಡೆಸುತ್ತಿದ್ದಾರೆ. ಈ ಸಂಬಂಧ ಮನೆಯವರು ಬೆಂಗಳೂರಿನ ನ್ಯಾಯಾಲಯಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಮಂಗಳೂರು ₹1.15 ಕೋಟಿ ದರೋಡೆ ಪ್ರಕರಣ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಬಂಧನ, ಸೇವೆಯಿಂದ ಅಮಾನತು